ಸೋಮವಾರ, ಏಪ್ರಿಲ್ 18, 2011

ಹನಿಗಳು


ದೀಪವಾರಿದ 
ಮೇಲಷ್ಟೇ 
ಬೆಳಕ ಕಂಡ ಹಾಗೆ 
ನೀನು 
ಮಾತು ನಿಲ್ಲಿಸಿದ ಮೇಲೆ 
ನಮ್ಮ ಸಂಬಂಧ 
ಸುಧಾರಿಸಿತು  

೨ 

ಪ್ರೀತಿ 
ಸತ್ತುಹೋಯಿತೆಂದು
ನಿಸೂರಾಗಿ
ಕನ್ನಡಿಯೆದುರು
ನಿಂತುಕೊಂಡೆ
ನನ್ನೊಳಗಿನ ಮನುಷ್ಯ
ಸತ್ತಿರುವುದಷ್ಟೇ
ಕಂಡಿತು


ಬೆಳಕು ಎಂದರೆ
ಬೇರೇನಲ್ಲ
ನಿನ್ನ  ಹೃದಯದಲ್ಲಿ
ನನ್ನ ಹೆಸರು
ಮೂಡಿದ ಕ್ಷಣವಷ್ಟೇ
ಕತ್ತಲನ್ನೂ ವ್ಯಾಖ್ಯಾನಿಸು
ಎಂದರೆ ಏನು ಹೇಳಲಿ ?
ನನ್ನ ಹೆಸರು
ನಿನ್ನ ಹೃದಯದಿಂದ 
ಅಳಿಸಿಹೋಗುವ ಹೊತ್ತಷ್ಟೆ...



ನಾವು
ಮಾತನಾಡುತ್ತಿಲ್ಲವೆಂಬುದು
ನಿಜಕ್ಕೂ
ಬೇಸರದ ಸಂಗತಿ
ಆದರೆ ವಾಸ್ತವ
ಹೀಗಿದೆಯಲ್ಲ
ನಾವು ಮಾತನಾಡಲು
ಆರಂಬಿಸುವ ತನಕ
ನಮ್ಮ ಸಂಬಂಧ
ನಲುಗದೆ ಉಳಿಯುವುದು ....

                   -ಅನಾಮಿಕ

ಕುಲವಧು

ಪ್ರತಿಭಾ ನಂದಕುಮಾರ್ ಬರೆದ ಕವಿತೆ.



ನಿಮ್ಮದು ಕುಲಾಚಾರವಾದರೆ

ನಾನು ಕುಲವಧು ಕಾಣಿರಯ್ಯ


ನೀವು ಕಾಪಾಲಿಕರಾದರೆ

ನಾನು ಕಾಲಿ


ಪಿಂಡಾಂಡಬ್ರಹ್ಮಾಂಡಗಳ ಸೃಷ್ಟಿಯಲ್ಲಿ

ನಾನು ಪ್ರಧಾನ ನೀವು ಗೌಣ

ಸಂಹಾರಕ್ರಮದಲ್ಲಿ ಅದು ವ್ಯತಿರಿಕ್ತ


ನಾವು ಯಮಳರಲ್ಲ

ವೆಂದು ಪರಿತಪಿಸಿದೆ

ತಪ್ಪು ತಪ್ಪು


ಹೂಂಕಾರದಲ್ಲಿ ಹುಟ್ಟಿದವಳು

ಉದ್ಧತ ನರ್ತನದಲ್ಲಿ ಮಗ್ನಳಾಗಿ ನಾನು

ನಗ್ನ ಮಹಾಕಾಲನ ಎದೆ ತುಳಿದವಳು


ನೀವು ತಳ್ಳಿದಿರೆಂದು

ಬೀಳುವೆನೋ ಸ್ವಾಮಿ?

-೨-

ಒಬ್ಬನೇ ಗಂಡನಿದ್ದರೆ ಪತಿವ್ರತೆ

ಇಬ್ಬರಿದ್ದರೆ ಕುಲಟೆ, ಮೂವರಿದ್ದರೆ ಧೃಷ್ಟೆ,

ನಾಲ್ವರಿದ್ದರೆ ಪುಂಶ್ಚಲೀ, ಐದು ಗಂಡರಿದ್ದರೆ ವೇಶ್ಯೆ,

ಏಳೆಂಟಿದ್ದರೆ ಪುಂಗೀ, ಅದಕ್ಕೂ ಹೆಚ್ಚಿದ್ದರೆ ಮಹಾವೇಶ್ಯೆ.

ಶೂದ್ರನ ಸಂಗ ಮಾಡಿದ ಬ್ರಾಹ್ಮಣ ಸ್ತ್ರೀ

ಹದಿನಾಲ್ಕು ದೇವೇಂದ್ರರ ಕಾಲದವರೆಗೆ

ಸಾವಿರ ಜನ್ಮಗಳ ಕಾಲ ಹೆಣ್ಣುಕಾಗೆಯಾಗಿ,

ನೂರು ಜನ್ಮ ಹೆಣ್ಣು ಹಂದಿಯಾಗಿ, ನೂರು ಜನ್ಮ ಹೆಣ್ಣು ನರಿಯಾಗಿ,

ನೂರು ಜನ್ಮ ಹೆಣ್ಣು ಕೋಳಿಯಾಗಿ, ಏಳು ಜನ್ಮ ಹೆಣ್ಣು ಪಾರಿವಾಳವಾಗಿ

ಏಳು ಜನ್ಮ ಹೆಣ್ಣು ಕಪಿಯಾಗಿ, ತದನಂತರ ಭೂಮಿಯಲ್ಲಿ ಚಂಡಾಲಿಯಾಗಿ ಹುಟ್ಟಿ

ಆಮೇಲೆ ಜಾರೆಯೂ ರೋಗಿಯೂ ಅಗಸರವಳೂ ಆಗಿ ಹುಟ್ಟಿ ನಂತರ

ಕುಷ್ಟರೋಗದಿಂದ ಬಳಲುವ ಗಾಣಗಿತ್ತಿಯಾಗಿ ಬದುಕಿ

ಸತ್ತು

ಶುದ್ಧಳಾಗುವಳು


ಅಂತೆ.

ಸತಿ ಪತಿವ್ರತೆಯ ಆ ಒಬ್ಬನೇ ಗಂಡನೇ ಮತ್ತೆ

ಕುಲಟೆ, ಧೃಷ್ಟೆ, ಪುಂಶ್ಚಲೀ, ವೇಶ್ಯೆ,

ಪುಂಗೀ, ಮಹಾವೇಶ್ಯೆಗಳ ಸಂಗ ಮಾಡುವವನು.

ಅವನು ಮುಂದಿನ ಜನ್ಮದಲ್ಲಿ ಮಂತ್ರಿಯಾಗಿ ಹುಟ್ಟುವನು.

  •  

ಭಾನುವಾರ, ಏಪ್ರಿಲ್ 17, 2011

ಕವಿತೆ

ತಾನು ಬೀಸಿಯೇ ಇಲ್ಲ ಎಂಬಂತೆ

ಗಾಳಿ ಸುಮ್ಮನಾಯಿತು


ತಾನು ಉಕ್ಕಿಯೇ ಇಲ್ಲ ಎಂಬಂತೆ
ಕಡಲು ಸುಮ್ಮನಾಯಿತು

ಆದರೆ,

ಬೋರಲು ಬಿದ್ದ ತೆಂಗಿನ ಮರಕ್ಕೆ
ಹಾಗೆ ಅಂದುಕೊಳ್ಳಲು ಆಗಲಿಲ್ಲ

ನನ್ನ ಸ್ಥಿತಿಯೂ ಅದೇ

ಪ್ರೀತಿಸಿಯೇ ಇಲ್ಲ ಎಂದು ಹೇಗೆ ಹೇಳಲಿ?

         - ಚಾಮರಾಜ ಸವಡಿ ಕವಿತೆ

ಶುಕ್ರವಾರ, ಏಪ್ರಿಲ್ 15, 2011

THE NEW LIFE


Open up thy lotus lips
From where the honey slips
Like a spring window dew
On the black cosmos hue
Sweep away from the earth
Like a golden fire in hearth.

Fly! Fly away in the cradle
Newly dressed in a bridle
Like an angel from the forest
With green grandiosity’s purest
And cheery soul of content
Like a blooming lily’s consent.

Rest and arrest in the bosom
Kiss and hiss the microcosm
Like a double – tongued snake
In the bunch of ripened stake
Where climbers hang bee hives
Like a venomous sting tilts lives.

Live and leave the world
Enter the centre of the crowd
Like a commander of mind
In the crunches of the kind
When trees bow down to feet
Like a heavy-hooded fleet.

                 -D B Gavani







ಬೆಳಕು




ಕೇಳಿದ ಪದಗಳಲ್ಲಿ
ಅರ್ಥ ಹುಡುಕದೆ
ಕೇಳದ ಸಾಲುಗಲ್ಲಿ
ಕನಸು ಕಾಣದ
ದೀಪ ಹಚ್ಚಿ
 ಬೆಳಕು  ಮಾತ್ರ ಸಾಕು.
--ಡಿಬಿಜಿ




ಮಂಗಳವಾರ, ಏಪ್ರಿಲ್ 12, 2011

ಎರಡು ಕವಿತೆ

 

ನನ್ನಿಂದ
ಈ ಜಗಕೆ 
ಏನೆಲ್ಲಾ ಆಗಿದೆಂದು 
ಬ್ರಮೆ ತುಂಬಬೇಡ ಲೋಕವೇ 
ನಾನು 
ಪಾಠ ಕಲಿತದ್ದೆಲ್ಲ 
ಹಣತೆಯಿಂದ 
ತಾನು ಉರಿಯುವ ಹೊತ್ತು 
ಜತೆಗಿರುವ ಹಣತೆಗಳ  
ಬೆಳಗಿಸಲದು ಎಂದೂ 
ನಿರಾಕರಿಸದು 
ಇಷ್ಟಾಗಿಯೂ ಹಣತೆಗಿರದ 
ಬ್ರಮೆ 
ನನ್ನ ತಲೆಗೇಕೆ
ತುಂಬುತಿರುವೆ ಲೋಕವೆ?

೨ 

ನನ್ನ ಕವಿತೆ 
ಎಲ್ಲವೂ ಆಗಿದೆ 
ಅದು ನನ್ನ ಹುಟ್ಟು 
ಮತ್ತು ಸಾವು 
ಅದು ನನ್ನ ಸ್ವರ್ಗ 
ಮತ್ತು ನರಕ 
ಅದು ನನ್ನ ಆಪ್ತ ಗೆಳತಿ 
ಮತ್ತು ಕೊಲೆಗಾರ್ತಿ 
ಅದು ನನ್ನ ಬಾಯಾರಿಕೆ 
ಮತ್ತು ನನ್ನ ರಕ್ತ ಕುಡಿದು ತಣಿಯುವ ನಗು 
ಅದು ನನ್ನ ಅಕ್ಸೋಣಿ ಮೈಲುಗಳ ಬೆಳಕು 
ಮತ್ತು ಕತ್ತಲೆ 
ಅದಿಲ್ಲದೆ ನಾನು
ಬದುಕಿರಲಾರೆನಷ್ಟೆ
      -ಅನಾಮಿಕ  

ಸೋಮವಾರ, ಏಪ್ರಿಲ್ 11, 2011

ಹಗಲು ವೇಷಗಾರರು: ಕಲೆ, ಬದುಕು ಮತ್ತು ವಾಸ್ತವ




ಕುತೂಹಲಕ್ಕೆ ಹಗಲುವೇಷಗಾರರು ಎನ್ನುವ ಪದವನ್ನು ಕೊಟ್ಟು ಗೂಗಲ್‌ನಲ್ಲಿ ಹುಡುಕಲು ಹೇಳಿದೆ. ಅಲ್ಲಿ ಬಂದ ನಾಲ್ಕೈದು ಪುಟಗಳ ಬಹುಪಾಲು ದಾಖಲುಗಳಲ್ಲಿ ರಾಜಕಾಕುತೂಹಲಕ್ಕೆ ಹಗಲುವೇರಣಿಗಳನ್ನು ಹಗಲುವೇಷಗಾರರು ಎಂದು ಟೀಕಿಸಿದ ಉಲ್ಲೇಖಗಳೇ ಹೆಚ್ಚಾಗಿದ್ದವು. ಉಳಿದಂತೆ ಒಂದೆರಡು ಉಲ್ಲೇಖಗಳು ವೃತ್ತಿ ಕಲಾವಿದರಾದ ಹಗಲುವೇಷಗಾರರ ಬಗ್ಗೆ ಇದ್ದವು. ಇದು ಬಹುಶಃ ಹಗಲುವೇಷಗಾರರ ಸದ್ಯದ ಸ್ಥಿತಿಯನ್ನು ವಿವರಿಸಲು ಒಳ್ಳೆಯ ರೂಪಕ ಎಂದು ಭಾವಿಸುವೆ. ಕಾರಣ ಇಂದು ಜನಪದ ಕಲಾವಿದರಾದ ಹಗಲುವೇಷಗಾರರನ್ನು ಮೀರಿಸುವಂತಹ ಹಗಲುವೇಷಗಳ ಮುಖವಾಡಗಳನ್ನು ರಾಜಕಾರಣಿಗಳು, ಅಧಿಕಾರಿಗಳು ಹಾಕಿ ಸಾಮಾನ್ಯ ಜನರನ್ನು ಮರುಳುಗೊಳಿಸುತ್ತಿಕುತೂಹಲಕ್ಕೆ ಹಗಲುವೇಷಗಾರರು ಎನ್ನುವ ಪದವನ್ನು ಕೊಟ್ಟು ಗೂಗಲ್‌ನಲ್ಲಿ ಹುಡುಕಲು ಹೇಳಿದೆ. ಅಲ್ಲಿ ಬಂದ ನಾಲ್ಕೈದು ಪುಟಗಳ ಬಹುಪಾಲು ದಾಖಲುಗಳಲ್ಲಿ ರಾಜಕಾರಣಿಗಳನ್ನು ಹಗಲುವೇಷಗಾರರು ಎಂದು ಟೀಕಿಸಿದ ಉಲ್ಲೇಖಗಳೇ ಹೆಚ್ಚಾಗಿದ್ದವು. ಉಳಿದಂತೆ ಒಂದೆರಡು ಉಲ್ಲೇಖಗಳು ವೃತ್ತಿ ಕಲಾವಿದರಾದ ಹಗಲುವೇಷಗಾರರ ಬಗ್ಗೆ ಇದ್ದವು. ಇದು ಬಹುಶಃ ಹಗಲುವೇಷಗಾರರ ಸದ್ಯದ ಸ್ಥಿತಿಯನ್ನು ವಿವರಿಸಲು ದ್ದಾರೆ, ಹಗಲು ದರೋಡೆ ಮಾಡುತ್ತಿದ್ದಾರೆ. ಹಾಗಾಗಿ ಹಗಲುವೇಷ ಎನ್ನುವ ಪದವೇ ನಕಾರಾತ್ಮಕ ಅರ್ಥವನ್ನು ಪಡೆದುಕೊಂಡುಬಿಟ್ಟಿದೆ. ಆದರೆ ನಿಜಕ್ಕೂ ಹಗಲುವೇಷವನ್ನು ವೃತ್ತಿಯನ್ನಾಗಿಸಿಕೊಂಡ ಒಂದು ಜನಸಮುದಾಯದ ಗುಂಪೇ ಕರ್ನಾಟಕದಲ್ಲಿದೆ. ಆದರೆ ಇವರ ವೇಷ ಮೋಸಗೊಳಿಸಲಿಕ್ಕಲ್ಲ, ಬದಲಾಗಿ ಜನರನ್ನು ರಂಜಿಸಿಲು ಮತ್ತು ಸಾಂಸ್ಕೃತಿಕ ಪರಂಪರೆಯ ಕುರುಹುಗಳನ್ನು ಕಾಪಾಡಲು. ಹಾಗಾಗಿ ನಾಟಕ ಕಲೆಯನ್ನು ಮನೆ ಮುಂದೆ ಕೊಂಡೊಯ್ದಿರುವುದು ಈ ಅಲೆಮಾರಿ ಸಮುದಾಯದ ಹೆಗ್ಗಳಿಕೆ. ಈ ಸಮುದಾಯ ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ನಾಣ್ಯಾಪುರ, ಹೊಸಪೇಟೆ ತಾಲೂಕಿನ ರಾಮಸಾಗರ, ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಕುದರಮೋತಿ, ವಟಪರವಿ ಮುಂತಾದ ಭಾಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದು ಮೂಲತಃ ಅಲೆಮಾರಿ ಸಮುದಾಯ. ಇವರ ಒಂದೊಂದು ಕುಟುಂಬಗಳು ಇಂತಿಷ್ಟು ಹಳ್ಳಿಗಳನ್ನು ಹಂಚಿಕೊಂಡಿರುತ್ತಾರೆ. ಆ ಹಳ್ಳಿಗಳಲ್ಲಿ ಏಳು ದಿನಗಳ ಕಾಲ ಬೇರೆ ಬೇರೆ ವೇಷ ಧರಿಸಿ, ಕೊನೆಯ ದಿನ ಇಂತಿಷ್ಟು ಎಂದು ವಂತಿಗೆಯನ್ನು ಧಾನ್ಯ, ಹಣ, ಬಟ್ಟೆ, ಜಾನುವಾರುಗಳ ರೂಪದಲ್ಲಿ ಪಡೆಯುತ್ತಾರೆ. ಇವರ ವೇಷಗಾರಿಕೆ ಮುಖ್ಯವಾಗಿ ರಾಮಾಯಣ, ಮಹಾಭಾರತದ ಉಪಕಥೆಗಳನ್ನು ಆಧರಿಸಿರುತ್ತವೆ. ಈ ಕಥನದ ನಿರೂಪಣೆಗಳಲ್ಲಿ ಇವರದೇ ಆದ ಸ್ಥಳೀಯ ಪಠ್ಯಗಳು ಸೇರಿರುತ್ತವೆ. ಇದು ರಾಮಾಯಣ, ಮಹಾಭಾರತದ ಅಧ್ಯಯನಕಾರರಿಗೆ ಒಂದು ಹೂಸ ಆಯಾಮವನ್ನು ಒದಗಿಸಬಲ್ಲದು. ಆಧುನಿಕ ಸಿನಿಮಾದ ಹಾಡುಗಳನ್ನು ಅವರದೇ ದಾಟಿಯಲ್ಲಿ ಹಾಡುತ್ತಾ ಈ ಕಾಲದವರೂ ಆಗುತ್ತಾರೆ. ಇವರು ವಾರದ ಕೊನೆಯ ದಿನ ವಂತಿಗೆಯನ್ನು ಎತ್ತುವಾಗ ಇಡೀ ಊರಿನ ಪ್ರತಿ ಮನೆಯವರಿಗೂ ‘ಗೌಡ್ರೆ ನಿಮ್ಮಾವ ನಾಲ್ಕು ಮನೆ ಕೈ ಎತ್ತಿ ಕೋಡೋ ಮನೆತನಗಳು..ನೀವಾ ಇಂಗಂದ್ರ ಹ್ಯಾಂಗ..’ಎನ್ನುತ್ತಿದ್ದರು. ಇದು ಊರಲ್ಲಿ ಗೌಡರ ಮನೆತನಕ್ಕೆ ಮಾತ್ರ ಸಲ್ಲುವ ಗೌರವ ನಮಗೂ ಸಲ್ಲಿತೆಂದು ಹಲವರು ತಮ್ಮ ತಮ್ಮ ಕೀಳಿರಿಮೆಯನ್ನು ಬಿಟ್ಟು ಬದುಕಿಗೆ ಹೊಸ ಉತ್ಸಾಹವನ್ನು ಪಡೆಯುತ್ತಿದ್ದರು. ಹೀಗೆ ಹಗಲುವೇಷಗಾರರ ಬದುಕು ಮತ್ತು ಕಲೆ ಈಗಲೂ ಚೂರೂ ಬದಲಾವಣೆ ಇಲ್ಲದೆ ಮುಂದುವರಿಯುತ್ತಿದೆ. ಇವರು ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಕುದರಮೋತಿ ಎನ್ನುವ ಗ್ರಾಮದಲ್ಲಿ ಎರಡು ವರ್ಷಕ್ಕೊಮ್ಮೆ ಮೊಹರಂ ಹಬ್ಬಕ್ಕೆ ಇಡೀ ಕರ್ನಾಟಕದ ಹಗಲುವೇಷಗಾರರು ಒಂದೆಡೆ ಸೇರುತ್ತಾರೆ. ಇಲ್ಲಿಯೇ ಅವರ ನ್ಯಾಯಪಂಚಾಯ್ತಿ, ವಧು ವರರ ಅನ್ವೇಷಣೆ, ಮದುವೆ, ಮುಂತಾದ ಆಚರಣೆಗಳು ನಡೆಯುತ್ತವೆ. ಅವರ ವೇಷಗಾರಿಕೆಗೆ ಬೇಕಾಗುವ ಬಣ್ಣ, ಸಂಗೀತದ ಪರಿಕರಗಳನ್ನೂ ಕೊಳ್ಳಲಾಗುತ್ತದೆ. ಈ ವರ್ಷ ಅಂದರೆ ಇದೇ ತಿಂಗಳ ಮೊಹರಂ ಕಡೇ ದಿನ ಡಿಸೆಂಬರ್ ೧೭ ರಂದು ಕುದರಮೋತಿಗೆ ಬೇಟಿ ನೀಡಿದರೆ ಇಡೀ ಕರ್ನಾಟಕದ ಹಗಲುವೇಷಗಾರರನ್ನು ಒಂದೆಡೆ ನೋಡಬಹುದಾಗಿದೆ. ಹಗಲುವೇಷಗಾರರು ಮೂಲತಃ ಅಲೆಮಾರಿ ಸಮುದಾಯ. ಇವರು ಒಂದೆಡೆ ನೆಲೆನಿಲ್ಲುವುದಿಲ್ಲ. ಈ ಕಾರಣವೇ ಬಹುತೇಕ ಹಗಲುವೇಷಗಾರರ ಹೊಸ ತಲೆಮಾರು ಶಿಕ್ಷಣಕ್ಕೆ ತೆರೆದುಕೊಳ್ಳುವುದಕ್ಕೆ ಕಡಿವಾಣ ಹಾಕಿದೆ. ಕರ್ನಾಟಕದಲ್ಲಿ ವೃತ್ತಿಕಲೆಯನ್ನು ಉಳಿಸಿಕೊಂಡು ಬರುತ್ತಿರುವವರಲ್ಲಿ ಇವರು ಪ್ರಮುಖರು. ಜನಪದ ಕಲೆಗಳು ನಶಿಸುತ್ತಿವೆ ಎಂದು ಹಲಬುವ ಜನಪದ ವಿದ್ವಾಂಸರಿಗೆ ಈ ಸಮುದಾಯ ಹೆಚ್ಚು ಸಂತೋಷವನ್ನು ಕೊಡಬಲ್ಲದು. ಆದರೆ ಈ ಸಮುದಾಯ ಶಿಕ್ಷಣಕ್ಕೆ ತೆರೆದುಕೊಂಡು ಆಧುನಿಕವಾಗಬೇಕೆಂಬ ಅಭಿವೃದ್ಧಿಪರ ಆಲೋಚನೆ ಮಾಡಿದಾಗ ಇದರ ಹಿಂದುಳಿಯುವಿಕೆಯ ಬಗ್ಗೆ ಆತಂಕವಾಗುತ್ತದೆ. ಯಾಕೆ ಹೀಗಾಗುತ್ತಿದೆ. ಇದು ಕೇವಲ ಹಗಲುವೇಷಗಾರರ ಸಮಸ್ಯೆಯಲ್ಲ, ಬಹುಪಾಲು ಅಲೆಮಾರಿ ಸಮುದಾಯಗಳ ಸಮಸ್ಯೆಯಾಗಿದೆ. ಈ ಎಲ್ಲಾ ಅಲೆಮಾರಿ ಸಮುದಾಯಗಳಿಗೆ ಅವರದೇ ನೆಲೆಯಲ್ಲಿ ಜಾಗ್ರತಗೊಳಿಸುವ ಅಗತ್ಯವಿದೆ. ಅವರ ಮಕ್ಕಳಾದರೂ ಶಿಕ್ಷಣಕ್ಕೆ ತೆರೆದುಕೊಳ್ಳುವಂತಹ ವಾತಾವರಣವನ್ನು ಸೃಷ್ಠಿಸಬೇಕಿದೆ. ಅಲೆಮಾರಿ ಸಮುದಾಯಗಳ ಅಭಿವೃದ್ಧಿಯ ಹೆಸರಲ್ಲಿ ಸರಕಾರದ ಹಣ ಅವ್ಯಯವಾಗುವುದೇನೂ ತಪ್ಪಿಲ್ಲ, ಆದರೆ ಅದು ಎಲ್ಲಿ ವ್ಯಯವಾಗುತ್ತಿದೆ? ಅದರ ಲಾಭಗಳನ್ನು ಪಡೆದುಕೊಂಡವರಾರು? ಇಂತಹ ಪ್ರಶ್ನೆಗಳನ್ನು ಕೇಳಿಕೊಂಡರೆ ಸಿಗುವ ಉತ್ತರ ಬ್ರಷ್ಟ ಸರಕಾರದತ್ತ ಕೈತೋರಿಸುತ್ತದೆ. ಇಂತಹ ಯೋಜನೆಗಳ ಹಣವನ್ನು ನಿಜವಾಗಿ ತಲುಪಬೇಕಾದವರಿಗೆ ತಲುಪಿಸುವಂತಹ ಕರ್ತವ್ಯ ಕೂಡ ಜಾನಪದ ವಿದ್ವಾಂಸರ ಜವಾಬ್ದಾರಿ ಎಂದು ಅರಿಯಬೇಕಿದೆ. ಈ ಹೊತ್ತು ಜನಪದ ಅಧ್ಯಯನಕಾರರು ಕೇವಲ ಜನಪದ ಕಲೆಯನ್ನು ಕಲೆ ಎನ್ನುವ ಚೌಕಟ್ಟಿನಲ್ಲಿ ಅಭ್ಯಸಿಸಬೇಕಿಲ್ಲ. ಬದಲಾಗಿ ಜನಪದ ಕಲಾವಿದರ ಬದುಕಿನ ನೆಲೆಯಲ್ಲಿ, ಮತ್ತವರು ಆಧುನಿಕ ಶಿಕ್ಷಣಕ್ಕೆ ತೆರೆದುಕೊಂಡು ಬದಲಾಗಬೇಕಾದ ಆಶಯಗಳಲ್ಲಿ ಅಧ್ಯನಗಳ ತಾತ್ವಿಕತೆಯನ್ನು ಬದಲಾಯಿಸಿಕೊಳ್ಳಬೇಕಿದೆ.
                                                                                    -ಡಾ. ಅರುಣ್ ಜೋಳದಕೂಡ್ಲಿಗಿ
ಹಾಯ್ಕುಗಳು
 
ಸಂಜೆಯಾದೆಂತೆಲ್ಲ
ಬೆಳೆಯುವುದು 
ಕತ್ತಲಾಗಸದಲ್ಲಿ 
ಕನಸಿನ ಕೌದಿ
೨ 
ಹಗಲೆಲ್ಲ 
ಬೆಳಕಾದವನು  
ಕೊನೆಗೆ  ಉಳಿಸಿಹೋದನು
ಕತ್ತಲನ್ನೇ 
೩ 
ಮೂಲೆ  ಸೇರಿದ ಹಣತೆ
ಮೊಗಸಾಲೆಗೆ   ಬಂದು
ಹೊತ್ತಿ ಉರಿಯುವಾಗ 
ವಂದಿಸಿತು ಕತ್ತಲೆಗೆ  
         - ಅನಾಮಿಕ      

ಮಂಗಳವಾರ, ಏಪ್ರಿಲ್ 5, 2011

ಒಂದಷ್ಟು ಕವಿತೆಗಳು 


ಇದು ಆಣೆ 
ಪ್ರಮಾಣ ಮಾಡಿ 
ಹೇಳುವ ಮಾತಲ್ಲ 
ಮೊಲೆ ಜೋತುಬೀಳುವ ಹೊತ್ತು 
ಎದೆಯೊಳಗೆ ಹಾಗೆ ಉಳಿದ 
ಭಾವಗಳಿಗೆ 
ಈ ಸಂಜೆಯೊಂದೇ ಸಾಕ್ಷಿ 
ಇದು ಪ್ರೇಮ ಕಾಯಕಟ್ಟುವ
ಹೊತ್ತಲ್ಲವೆಂದು ನಾಲಿಗೆ 
ಕಳ್ಕೊಂಡವಳೇ 
ಸಮಾದಿ ಕಲ್ಲಿನ ಅಕ್ಷರಗಳಾಗುವುದು 
ಕೆಲವು ಸಂಗತಿಗಳಷ್ಟೇ
ಮೀನಿಗೆ ಬೇರೆ
ಬದುಕಿಲ್ಲ
ನೀರ ಹೊರತು ಎಂಬುದಷ್ಟೇ
ನಿಂತುಹೋಗುವ ಉಸಿರಿನ
ಕೊನೆಯ ಮಾತಾಗಿ
ಉಳಿಯಲಿ
ಬೇಕಿದ್ದರೆ ನೀ ಎದೆಬಗೆದು 
ರಕ್ತ ಕುಡಿ
ನಿನ್ನ ಗಾಯದ ಗುರುತು ಹೊತ್ತು
ಉಸಿರಾಡಲಾರೆ


ನಿನ್ನ ಮುಟ್ಟಲಾರೆನೆಂಬುದು 
ನನಗೆ ಗೊತ್ತು 
ನಿನ್ನ ಕಾಣಲಾರೆನೆಂಬುದೂ 
ನನಗೆ ಗೊತ್ತು 
ಅಷ್ಟೇಕೆ 
ನಿನ್ನ ಮಾತು 
ಕೇಳಲಾರೆನೆನ್ನುವುದು 
ಖಚಿತವೆನಿಸಿದೆ 
ಇಷ್ಟೆಲ್ಲಾ  ಗೊತಿದ್ದವನಿಗೆ 
ಗೊತ್ತಾಗಲಾರದ 
ವಿಷಯ ಒಂದಿದೆ :
ಉರುಳುವ ಪ್ರತಿ 
ಕ್ಷಣ ನಿನ್ನ ಮೇಲಿನ 
ಪ್ರೀತಿಯನ್ನು ಹೆಚ್ಚಿಸುತ್ತಿದೆಯೆಲ್ಲ 
ಯಾಕೆ? 
೩ 
ಪವಾಡದ 
ಸಂಗತಿಯೆಂದರೆ 
ನಿನ್ನ ಸ್ಪರ್ಶಕ್ಕೆ 
ಕೊರಡು ಕೊನರುವುದು 
ಮಹಾಪವಾಡದ
 ಸಂಗತಿಯೆಂದರೆ 
ನೀನು ಸ್ಪರ್ಶಿಸದೆಹೋದರೆ 
ಕೊರಡು ಹಾಗೆ 
ಇರುವುದು  ....
        - ಅನಾಮಿಕ  

ಭಾನುವಾರ, ಏಪ್ರಿಲ್ 3, 2011

ಕಾಣ್ಕೆ
ಕಾಲವೇ
ನಾನಿನ್ನು ಅವಳನ್ನು
ಬೇಟಿ ಮಾಡಿಲ್ಲ
ಆದರೇನಂತೆ
ಗಲ್ಲ ಸುಕ್ಕುಗಟ್ಟಿದೆ
ನೆನಪುಗಳಿಂದ
ಖಾಲಿಯಾಗುಳಿದ
ರಾತ್ರಿಗಳಲ್ಲಿ ಕಣ್ಣರೆಪ್ಪೆ
ನೆರೆತಿದೆ
ಇದ್ಕೂ ಹೆಚ್ಚೇನಿಲ್ಲ
ನಡೆವ ಪಥದಲ್ಲಿ ಬದುಕು
ಮುದಿಯಾಗಿದೆ
 
      -ಅನಾಮಿಕ  

ಶನಿವಾರ, ಏಪ್ರಿಲ್ 2, 2011

ಮೂರ್ತಿಗಳ ’ಇಂಗ್ಲೀಷ್ ಮನಸ್ಸು’ ಮತ್ತು ರೈಗಳ ’ದೇಸಿ ಮನಸ್ಸು’




(ಉಷಾಕಟ್ಟೆಮನೆ ಅವರು ತಮ್ಮ ಮೌನಕಣಿವೆ ಬ್ಲಾಗ್ ನಲ್ಲಿ ಬರೆದುಕೊಂಡ ಬರಹವಿದು. ಒಂದು ಭಾಷೆ,ಸಂಸ್ಕೃತಿ , ಜಾನಪದ ಹೇಗೆ ಒಂದರೊಳಗೊಂದು ಬೆರೆತಿರುತ್ತವೆ ಎನ್ನುವುದನ್ನು ಅಕಾಡೆಮಿಕ್ ಶೈಲಿಯ ಭಾರವಿಲ್ಲದೆ ಆಪ್ತವಾಗಿ ಬರೆದಿದ್ದಾರೆ. ತುಳು ಭಾಷೆ ಮತ್ತು ಅದರ ದೇಸಿಯ ಅಂತರ್ಗತ ಜಗತ್ತನ್ನುಆಪ್ತ ಮಾತುಕತೆಯಲ್ಲಿ ಕಟ್ಟಿಕೊಟ್ಟಿದ್ದಾರೆ. ಈ ನೆಲೆಯಲ್ಲಿ ಕನ್ನಡದಲ್ಲಿ ಈಗಲೂ ಉಳಿದಿರುವ ಶಿಷ್ಟ ,ಜನಪದ ಎನ್ನುವ ಶ್ರೇಣೀಕೃತ ಮನಸ್ಥಿತಿಯ ಬಗ್ಗೆ ಸಣ್ಣ ತಕರಾರನ್ನೂ ಎತ್ತಿದ್ದಾರೆ.)

-ಉಷಾ ಕಟ್ಟೆಮನೆ

ಇನ್ಫೋಸಿಸ್ ಟೆಕ್ನಲಾಜೀಸ್ ಸಂಸ್ಥೆಯ ಸಂಸ್ಥಾಪಕ ನಾಗವಾರ ರಾಮರಾಯ ನಾರಾಯಣಮೂರ್ತಿಯವರಿಗೆ ಕನ್ನಡ ಬರುತ್ತದೆಯೆಂದು ಕನ್ನಡ ಕುಲಕೋಟಿಗೆ ಕೊನೆಗೂ ಗೊತ್ತಾಯಿತು. ಬೆಳಗಾವಿಯಲ್ಲಿ ನಡೆದ ವಿಶ್ವ ಕನ್ನಡ ಸಮ್ಮೇಳನದಲ್ಲಿ ಅವರು ಅಚ್ಚಕನ್ನಡದಲ್ಲಿ ಮಾತಾಡಿದರು. ಹಾಗೆಯೇ ಕನ್ನಡದ ಕುವರಿಯೆಂದೇ ಬಿಂಬಿಸಲಾಗುತ್ತಿರುವ ಬಾಲಿವುಡ್ ತಾರೆ ಐಶ್ವರ್ಯ ರೈಗೆ ಕನ್ನಡ ಬರುವುದಿಲ್ಲವೆಂದು ಕೂಡಾ ಸಾಬೀತಾಯಿತು.

ಮೂರ್ತಿಗಳ ಮಾತೃಭಾಷೆ ಕನ್ನಡ. ಹಾಗಾಗಿ ಅವರು ಕನ್ನಡದಲ್ಲಿ ತಡವರಿಸದೆ ಮಾತಾಡಿದರು. ಐಶ್ವರ್ಯಳ ಮಾತೃಭಾಷೆ ತುಳು. ಅದರಲ್ಲಾಕೆ ನಿರರ್ಗಳವಾಗಿ ಮಾತಾಡಬಲ್ಲಳು. ಕೆಲವು ವರ್ಷಗಳ ಹಿಂದೆ ಆಕೆ ಮಂಗಳೂರಿಗೆ ಬಂದಿದ್ದಳು. ಆಗ ಆಕೆಗಿನ್ನೂ ಮದುವೆಯಾಗಿರಲಿಲ್ಲ. ತನ್ನ ಹುಟ್ಟೂರಿನಲ್ಲಿ ತುಂಬಾ ಅಭಿಮಾನದಿಂದ ತುಳುವಿನಲ್ಲೇ ಭಾಷಣ ಮಾಡಿದ ಆಕೆ, “ಯಾನ್ ತುಳು ಆಣನೇ ಮದ್ಮೆ ಆಪಿನಿ” ಅಂದರೆ ’ನಾನು ತುಳು ಹುಡುಗನನ್ನೇ ಮದುವೆಯಾಗುತ್ತೇನೆ’ ಎಂದು ಹೇಳಿ ತುಳು ಹುಡುಗರಲ್ಲಿ ಪುಳಕವನ್ನು ತಂದಿದ್ದಳು.

ತುಳುವರು ಪ್ರಪಂಚದ ಯಾವ ಮೂಲೆಯಲ್ಲಿದ್ದರೂ ಅವರ ಮಾತೃಭಾಷೆ ತುಳುವೇ ಆಗಿರುತ್ತದೆ ಮತ್ತು ಅವರು ತಮ್ಮ ಮಕ್ಕಳಿಗೆ ತುಳು ಕಲಿಸುತ್ತಾರೆ, ಹಾಗಾಗಿ ಅವರ ಮಕ್ಕಳ ಮಾತೃಭಾಷೆ ತುಳುವೇ ಆಗಿರುತ್ತದೆ. ಈ ತುಳುನಾಡು ಕರ್ನಾಟಕವೆಂಬ ರಾಜ್ಯದೊಳಗೆ ಇರುವ ಕಾರಣದಿಂದಾಗಿ ಅವರನ್ನು ನಾವು ಕನ್ನಡಿಗರೆಂದೇ ಪರಿಗಣಿಸುತ್ತೇವೆ. ಅದನ್ನವರು ಪ್ರೀತಿಯಿಂದಲೇ ಒಪ್ಪಿಕೊಳ್ಳುತ್ತಾರೆ. ಇದೇ ಅಭಿಮಾನದಿಂದ ಐಶ್ವರ್ಯ ರೈ ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾಗವಹಿಸಿರಬಹುದು. ಬಾಳ ಠಾಕ್ರೆಯ ಬೆದರಿಕೆಯನ್ನೂ ಧಿಕ್ಕರಿಸಿ ಆಕೆ ಸಮ್ಮೇಳನದಲ್ಲಿ ಭಾಗವಹಿಸಿದಳೆಂಬುದನ್ನು ನಾವು ಗಮನಿಸಬೇಕು. ಬೇಕಾದರೆ ಹಿಂದಿ ತಾರೆಯರಾದ ಸುನಿಲ್ ಶೆಟ್ಟಿ, ಶಿಲ್ಪಶೆಟ್ಟಿ, ನಿರ್ದೇಶಕ ರೋಹಿತ್ ಶೆಟ್ಟಿ, ಸಂಗೀತ ನಿರ್ದೇಶಕ ಸಂದೀಪ್ ಚೌಟ ಅವರನ್ನು ಮಾತಾಡಿಸಿ ನೋಡಿ ಅವರು ತಾವು ತುಳುವರೆಂದು ಹೇಳಿಕೊಳ್ಳಲು ಹೆಮ್ಮೆಪಡುತ್ತಾರೆ, ತಮ್ಮ ಎದುರಿನಲ್ಲಿರುವವರು ತುಳುವರೆಂದು ಗೊತ್ತಾದರೆ ತುಳುವಿನಲ್ಲೇ ಮಾತು ಮುಂದುವರೆಸುತ್ತಾರೆ. ಇಂತಹ ನಡವಳಿಕೆಯನ್ನು ಕನ್ನಡದವರಿಂದ ನಿರೀಕ್ಷಿಸಲು ಸಾಧ್ಯವೇ?
ನಾರಾಯಣಮೂರ್ತಿಯವರು ಸಾರ್ವಜನಿಕವಾಗಿ ಕನ್ನಡ ಮಾತಾಡುವುದಿಲ್ಲ. ಎಲ್ಲಿಯೂ ತಾನು ಕನ್ನಡದವನೆಂದು ಹೆಮ್ಮೆಯಿಂದ ಹೇಳಿಕೊಳ್ಳುವುದಿಲ್ಲ. ಆದರೆ ಐಶ್ವರ್ಯ ರೈ ಸಾರ್ವಜನಿಕವಾಗಿ ತುಳು ಮಾತಾಡುತ್ತಾಳೆ, ತಾನು ತುಳುನಾಡಿನವಳು ಎಂದು ಹೇಳಿಕೊಳ್ಳಲು ಹೆಮ್ಮೆಪಡುತ್ತಾಳೆ. ಇದು ಕನ್ನಡಿಗರಿಗೂ ತುಳುವರಿಗೂ ಇರುವ ವ್ಯತ್ಯಾಸ.

ನನ್ನ ಮಾತೃಭಾಷೆ ತುಳು. ತುಳು ಅಂದ ತಕ್ಷಣ ನನ್ನ ಚಿತ್ತಭಿತ್ತಿಯಲ್ಲಿ ಹಲವು ವಿಚಾರಗಳು ಮೂಡಿಬರುತ್ತವೆ. ಅದು ಯಕ್ಷಗಾನ, ನಾಗಮಂಡಲ, ಭೂತರಾಧನೆ, ಕಂಬಳ, ಕೋಲ, ತಂಬಿಲ, ಡಕ್ಕೆಬಲಿ, ಕೋಳಿ ಅಂಕ, ಖೆಡ್ಡಸ, ಕೋಟಿ-ಚನ್ನಯ್ಯ, ಸಿರಿಜಾತ್ರೆ….ಹೀಗೆ ನಂಬಿಕೆ, ಆಚರಣೆಗಳ ಮೆರವಣಿಗೆ ಸಾಗಿಬರುತ್ತದೆ. ಇದನ್ನೇ ನಾವು ’ತುಳುವ ಮನಸ್ಸು’ ಎಂದು ಕರೆಯುತ್ತೇವೆ. ತುಳು ಕೇವಲ ಒಂದು ಭಾಷೆ ಮಾತ್ರ ಅಲ್ಲ. ಯಕ್ಷಗಾನ, ಕಂಬಳ, ಸಿರಿಜಾತ್ರೆ, ಭೂತರಾದನೆಯ ಹೊರತಾದ ತುಳುನಾಡನ್ನು ಕಲ್ಪಿಸಿಕೊಳ್ಳುವುದಕ್ಕೆ ನನಗೆ ಸಾಧ್ಯವಿಲ್ಲ. ಅದರೆ ಕನ್ನಡ ಎಂದ ತಕ್ಷಣ ಇಷ್ಟು ಶಕ್ತಿಯುತವಾದ ಬಿಂಬಗಳು ನನ್ನ ಚಿತ್ತಭಿತ್ತಿಯಲ್ಲಿ ಮೂಡಿಬರುವುದೇ ಇಲ್ಲ. ನಮ್ಮ ಶಿಷ್ಟ ಸಂಸ್ಕೃತಿ-ಶಿಷ್ಟ ಸಾಹಿತ್ಯವು ಜನಪದ ಸಂಸ್ಕೃತಿ-ಜನಪದ ಸಾಹಿತ್ಯವನ್ನು ಕಡೆಗಣಿಸುತ್ತಿರುವ ಪರಿಣಾಮ ಇದಾಗಿರಬಹುದೇ? ಸಂಸ್ಕೃತ ವಿಶ್ವವಿದ್ಯಾಲಯವನ್ನು ಕಟ್ಟುವಲ್ಲಿನ ಆಸಕ್ತಿ ಜಾನಪದ ವಿಶ್ವವಿದ್ಯಾಲಯವನ್ನು ಕಟ್ಟುವುದರಲ್ಲಿ ಏಕಿಲ್ಲ?

ಕಳೆದ ವರ್ಷ ಧರ್ಮಸ್ಥಳದ ಉಜಿರೆಯಲ್ಲಿ ವಿಶ್ವ ತುಳು ಸಮ್ಮೇಳನ ನಡೆಯಿತು. ಮೂರು ದಿನಗಳ ಕಾಲ ನಡೆದ ಸಮ್ಮೇಳನದಲ್ಲಿ ನಿರೀಕ್ಷೆಗೂ ಮೀರಿ ತುಳುವರು ಭಾಗವಹಿಸಿದ್ದರು. ವೀರೇಂದ್ರ ಹೆಗ್ಗಡೆಯವರನ್ನು ’ಗುರ್ಕಾರ’[ ಯಜಮಾನ] ರನ್ನಾಗಿಸಿ ವೀಳ್ಯಕೊಟ್ಟ ಈ ಸಮ್ಮೇಳನಕ್ಕೆ ೩ಲಕ್ಷ ಜನರು ಬರುವವರೆಂದು ಅಂದಾಜಿಸಲಾಗಿತ್ತು. ಆದರೆ ೬ ಲಕ್ಷಕ್ಕೂ ಅಧಿಕ ತುಳು ಬಂಧುಗಳು ಪ್ರಪಂಚದಾದ್ಯಂತದಿಂದ ಉಜಿರೆಗೆ ಹರಿದು ಬಂದಿದ್ದರು. ಹಿಂದಿನ ಕಾಲದಲ್ಲಿ ಎತ್ತಿನ ಗಾಡಿ ಕಟ್ಟಿಕೊಂಡು ಮನೆ ಮಂದಿಯೆಲ್ಲಾ ಜಾತ್ರೆಗೆ ಬಂದಂತೆ ತುಳು ಬಾಂದವರು ವಾಹನಗಳನ್ನೇರಿ ಉಜಿರೆಗೆ ಬಂದಿದ್ದರು.

ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯ ದಕ್ಷಿಣ ಭಾಗ ಮತ್ತು ಕೇರಳದ ಉತ್ತರ ಭಾಗವಾದ ಕಾಸರಗೋಡು ಜಿಲ್ಲೆಯಲ್ಲಿ ವಾಸಿಸುವ ಬಹುಸಂಖ್ಯಾತರು ಮಾತಾಡುವ ಭಾಷೆ ತುಳು.ಇದರಲ್ಲಿ ಬಹಳಷ್ಟು ಜನ ದೂರದ ಮುಂಬಯಿ, ಮದ್ಯಪ್ರಾಚ್ಯ ದೇಶಗಳಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಆದರೂ ಅವರು ತುಳುನಾಡನ್ನು, ತುಳುಭಾಷೆಯನ್ನು ಮರೆತವರಲ್ಲ. ತಾವಿರುವೆಡೆಯಲ್ಲಿಯೇ ತಮ್ಮ ದೈವಗಳಿಗೂ ಒಂದು ’ಸ್ಥಾನ’ ಕಲ್ಪಿಸಿಕೊಳ್ಳುತ್ತಾರೆ. ವರ್ಷಕ್ಕೊಮ್ಮೆಯಾದರೂ ತಾಯ್ನಾಡಿಗೆ ಬಂದು ನೇಮ, ಕೋಲ, ಜಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ.

ಒಂದು ಅಂದಾಜಿನ ಪ್ರಕಾರ ಸುಮಾರು ೫೦ ಲಕ್ಷ ತುಳುವರು ಪ್ರಪಂಚದಾದ್ಯಂತ ಹರಡಿಕೊಂಡಿದ್ದಾರೆ. ಕರ್ನಾಟಕದ ಒಟ್ಟು ಜನಸಂಖ್ಯೆಯ ಶೇ ೪ರಷ್ಟು ಜನರು ತುಳುವರಾಗಿದ್ದಾರೆ. ಪಂಚದ್ರಾವಿಡ ಭಾಷೆಯಲ್ಲಿ ಒಂದಾದ ತುಳುವಿಗೆ ಸ್ವಂತ ಲಿಪಿಯಿಲ್ಲ; ಭವ್ಯ ಸಾಹಿತ್ಯ ಪರಂಪರೆಯಿಲ್ಲ. ಕೇವಲ ಮೌಕಿಕ ಸಾಹಿತ್ಯದ ಮೂಲಕವೇ ಉಳಿದುಕೊಂಡು ಬಂದಿರುವ ಸಂಸ್ಕೃತಿಯಿದು.

ಇಷ್ಟೆಲ್ಲಾ ಹೇಳಿದುದರ ಸ್ಪಷ್ಟ ಉದ್ದೇಶ ಇಷ್ಟೇ; ಜಾನಪದದ ಜೊತೆ ಅನುಸಂಧಾನ ನಡೆಸದ ಯಾವುದೇ ಭಾಷೆ ಜೀವಂತವಾಗಿ ಉಳಿಯುವುದು ಕಷ್ಟ. ಉಳಿದರೂ ದ್ವೀಪವಾಗಿಬಿಡುತ್ತದೆ. ಸಂಸ್ಕೃತ ಭಾಷೆಯೇ ಇದಕ್ಕೆ ಉದಾಹರಣೆಯಾಗಿ ನಮ್ಮ ಕಣ್ಣ ಮುಂದಿದೆ. ಕನ್ನಡದ ಮಟ್ಟಿಗೆ ಹೇಳುವುದಾರೆ ಮಣ್ಣಿನ ಜೊತೆ ನೇರ ಸಂಪರ್ಕ ಹೊಂದಿರುವ ಬಹುಸಂಖ್ಯಾತ ಜನಸಮುದಾಯವಾದ ರೈತರೊಡನೆ, ಶ್ರಮಿಕವರ್ಗದ ಜೊತೆ ಗುರುತಿಸಿಕೊಂಡು, ಪ್ರಭುತ್ವದ ಭಾಷೆಯಾಗಬೇಕು. ಇಲ್ಲದಿದ್ದರೆ ಜಾಗತೀಕರಣದ ಭರಾಟೆಯಲ್ಲಿ ಕನ್ನಡ ಕೊಚ್ಚಿ ಹೋಗುವ ಸಾಧ್ಯತೆಯಿದೆ. ಅಮೇರಿಕದ ಅಭಿವೃದ್ದಿಯನ್ನು ಮಾದರಿಯನ್ನಾಗಿರಿಸಿಕೊಂಡಿರುವ ನಾರಾಯಣಮೂರ್ತಿಯಂಥ ವ್ಯಾಪಾರಸ್ಥರು ಅದಕ್ಕೆ ಕಾರಣರಾಗುತ್ತಾರೆ.

ಸಂಸ್ಕೃತಿಯೆನ್ನುವುದು ಪ್ರಾದೇಶಿಕ ವೈಶಿಷ್ಟತೆಗಳನ್ನು ಒಳಗೊಂಡಿರುತ್ತದೆ. ಆಯಾಯ ಪ್ರದೇಶದ ಪರಿಸರ, ಜನಜೀವನ, ಆಚಾರ-ವಿಚಾರ, ಆಹಾರ ಪದ್ದತಿ, ಉಡುಗೆ-ತೊಡುಗೆಗಳು ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ. ಪ್ರತಿ ಸಂಸ್ಕೃತಿಯೂ ಅನನ್ಯವಾದುದು. ಇದರ ಅಭಿವ್ಯಕ್ತಿಯೇ ಜನಪದ ಸಾಹಿತ್ಯ, ಜನಪದ ಸಂಸ್ಕೃತಿ. ಇದುವೇ ಕನ್ನಡ ಸಂಸ್ಕೃತಿಯ ಮೂಲದ್ರವ್ಯ. ಈ ಅನನ್ಯತೆಯನ್ನು ನಾಶಪಡಿಸುವ ಹುನ್ನಾರ ಬಹುರಾಷ್ಟ್ರೀಯ ಕಂಪೆನಿಗಳಿಂದ ನಡೆಯುತ್ತಿದೆ.

ಈ ಮೂಲದ್ರವ್ಯ ನಗರ ಕೇಂದ್ರಿತ ಮನಸ್ಸಿನ ಬಹುತೇಕ ಉದ್ದಿಮೆದಾರರಲ್ಲಿ ಇಲ್ಲ. ಪ್ರಜಾಪ್ರಭುತ್ವದ ನಾಲ್ಕನೆಯ ಸ್ತಂಭವಾದ ಮಾಧ್ಯಮದಲ್ಲಿ ಇಲ್ಲ. ರಾಜಕಾರಣಿಗಳಲ್ಲಿ ಇಲ್ಲ. ಪ್ರಭುತ್ವದಲ್ಲಿ ಇಲ್ಲ. ಇದ್ದಿದ್ದರೆ ಇವತ್ತು ವಿಶ್ವಕನ್ನಡ ಸಮ್ಮೇಳನದಲ್ಲಿ ಭಾಗವಹಿಸಲು ಬಂದ ಕಲಾತಂಡಗಳು ವಸತಿ ವ್ಯವಸ್ಥೆಯಿಲ್ಲದೆ ಬೀದಿಯಲ್ಲಿ ಮಲಗುವ ಪ್ರಮೇಯ ಬರುತ್ತಿರಲಿಲ್ಲ. ರೈತ ನಾಯಕನೊಬ್ಬ ಇದೇ ವೇದಿಕೆಯಲ್ಲಿ ಕಣ್ಣೀರು ಹಾಕುವ ದೈನ್ಯತೆ ಉಂಟಾಗುತ್ತಿರಲಿಲ್ಲ. ಕನ್ನಡಿಗರು ಸಂಭ್ರಮಪಡಬೇಕಾಗಿದ್ದ ಸಮ್ಮೇಳನದಲ್ಲಿ ಅಪಸ್ವರದ ಧ್ವನಿ ಏಳುತ್ತಿರಲಿಲ್ಲ.

ನಿಜ. ಇಂಗೀಷ್ ಭಾಷೆಯೆನ್ನುವುದು ಜ್ನಾನದ ಕೀಲಿ ಕೈ. ಅದಕ್ಕಿರುವ ಅಗಾದ ಸಾಧ್ಯತೆಗಳ ಅರಿವು ಪ್ರತಿಯೊಬ್ಬ ಕನ್ನಡಿಗನಿಗೂ ಇದೆ. ಅದರಿಂದಾಗಿಯೇ ಗ್ರಾಮಾಂತರ ಪ್ರದೇಶದ ಸರಕಾರಿ ಶಾಲೆಗಳು ಮುಚ್ಚುವ ಸ್ಥಿತಿ ತಲುಪಿದೆ. ಆದರೆ ನಮ್ಮ ಭಾವ ಪ್ರಪಂಚ ವಿಸ್ತಾರಗೊಳ್ಳುವುದು ಮಾತೃಭಾಷೆಯಿಂದ. ಕನ್ನಡದ ಮನಸ್ಸು ರೂಪುಗೊಳ್ಳುವುದು ಇಲ್ಲಿಯೇ. ಹಾಗಾಇಯೇ ಆಡಳಿತ ಭಾಷೆ ಕನ್ನಡವಾಗಬೇಕು. ನಮ್ಮ ದೈನಂಧಿನ ವ್ಯವಹಾರ ಕನ್ನಡದಲ್ಲಿಯೇ ಸರಾಗವಾಗಿ ಸಾಗುವಂತಾಗಬೇಕು. ಆದರೆ ಹಾಗಾಗಲು ಸಾಧ್ಯವೇ? ನಮ್ಮ ರಾಜಕಾರಣಿಗಳಲ್ಲಿ ಆ ಇಚ್ಛಾಶಕ್ತಿ ಬರಲು ಸಾಧ್ಯವೇ?

ಅಭಿವೃದ್ಧಿಯ ಹೆಸರಲ್ಲಿ ಪ್ರಕೃತಿಯ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಪ್ರಕೃತಿ ಮಾತೆ ಒಮ್ಮೆ ಮೈಕೊಡವಿ ಎದ್ದರೆ ಏನಾಗುತ್ತದೆಯೆಂಬುದು ಈಗ ಸುನಾಮಿಯಿಂದ ನರಳುತ್ತಿರುವ ಜಪಾನ್ ಅನ್ನು ನೋಡಿದರೆ ತಿಳಿಯುತ್ತದೆ. ಜಗತ್ತಿನಲ್ಲಿರುವ ಪರಮಾಣು ಸ್ಥಾವರಗಳಲ್ಲಿ ಕೆಲವೇ ಕೆಲವು ಸ್ಫೋಟಗೊಂಡರೂ ಸಾಮೂಹಿಕ ನರಹತ್ಯೆ ಸಂಭವಿಸಬಹುದಲ್ಲವೆ? ಇದು ಮನುಷ್ಯ ತಾನಾಗೇ ತೋಡಿಕೊಳ್ಳುತ್ತಿರುವ ಮರಣಗುಂಡಿಯಲ್ಲವೇ?

ಈ ಸಂದರ್ಭದಲ್ಲಿ ನಾವು ಮತ್ತೆ ದೇಶಿ ಚಿಂತನೆಯತ್ತ ಹೊರಳಬೇಕಾಗಿದೆ. ಅದಕ್ಕೆ ಕನ್ನಡದ ಮನಸ್ಸು ಬೇಕು; ತುಳು ಮನಸ್ಸು ಬೇಕು. ಅಂಥ ಮನಸ್ಸುಗಳನ್ನು ಕಟ್ಟುವ ಕೆಲಸ ಆಗಬೇಕಾಗಿದೆ. ಅದಕ್ಕೆ ಸಾಹಿತ್ಯ ಸಮ್ಮೇಳನಗಳು, ವಿಶ್ವಕನ್ನಡ ಸಮ್ಮೇಳನಗಳು ನೆರವಾಗಬೇಕು. ಆದರೆ ಈಗ ನಡೆಯುತ್ತಿರುವ ಜಾತ್ರೆಯಂಥ ಸಮ್ಮೇಳನಗಳಿಂದ ಇದು ಸಾಧ್ಯವೇ ಎಂಬುದು ದೊಡ್ಡ ಪ್ರಶ್ನಾರ್ಥಕ ಚಿಹ್ನೆಯಾಗಿದೆ.

MY MOTHER


      
To Krishnaji Sobti

Know the fine arts of a loving woman
Remembering the tides and ebbs of love
In the sacred heart of intellectual dove
Sweet soul exuberantly exhibits the man.
Happily she searches for sober sanctity
Neatness is the nectar in the creative toil
Awakening the seeds from the womb of soil
‘Jindaginama’ and ‘Mitro Marjani’ in serenity.

Idolatress of Ardhanarishwar through out life
Such belief is truth that writing the bisexual
Onto the journey of the creation is reciprocal
Benign Shimlean love lurks lusciously in stripe.
Thy message in ‘Ye Ladaki’ is the future vision
I adore my mother with a profuse provision.

                          - Dr. D. B. Gavani




THE NEW PARADISE



When shall I enter your heart?
My body rests and mind minces
The salvation of slave’s old fences
That seized my paths of chariot.
The long standing sacred forest
That preserved sumptuous manna dew
Quenched the hunger of love’s rue
And compassion crumbled to rest.
My soul searches for the New Paradise
That enthralls the enigmatic hope of Eden
Emerges the emotions of Love-laden
Lure the luscious lustre in surmise.

I wander when the world is in bed
I sleep after all the jovial tears shed.